ಶಿವಮೊಗ್ಗ: ಇದ್ದಕ್ಕಿದ್ದಂತೆ ಪ್ರಜ್ಞೆತಪ್ಪಿ ಕುಸಿದು ಬಿದ್ದ ವಿದ್ಯಾರ್ಥಿನಿಯೊಬ್ಬರು ಲೋ ಬಿಪಿಯಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
17 ವರ್ಷದ ಮುಬಷಿರ ಬಾನು ಮೃತ ವಿದ್ಯಾರ್ಥಿನಿ. ನಂಜಪ್ಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಇತರ ವಿದ್ಯಾರ್ಥಿನಿಯರ ಜೊತೆ ಪ್ರಾಂಶುಪಾಲರ ರೂಮಿನತ್ತ ತೆರಳುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.
ಲೋ ಬಿಪಿಯಿಂದಾಗಿ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.