ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜೊತೆ ಬೆಳಗಾವಿ ಅಧಿವೇಶನಕ್ಕೆ ಆಗಮಿಸಿ ಸದನದ ಕಾರ್ಯಕಲಾಪಗಳನ್ನು ವೀಕ್ಷಿಸಿದರು.
ಇದೇ ವೇಳೆ ಗೃಹಲಕ್ಷ್ಮೀ ಫಲಾನುಭವಿ ಮಹಿಳೆಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಯೋಜನೆ ಜಾರಿಗೆ ತಂದಿದ್ದಕ್ಕೆ ಹಾಗೂ ಗೃಹಲಕ್ಷ್ಮೀ ಹಣದಿಂದ ಅನುಕೂಲವಾಗುತ್ತಿರುವ ಬಗ್ಗೆ ಸಂತಸ ಹಂಚಿಕೊಂಡಿರು.
ಈ ವೇಳೆ ಸುರ್ವಣ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮೀ ಫಲಾನುಭವಿಗಳನ್ನು ಭೇಟಿ ಮಾಡಿ ಸಂತೋಷವಾಯಿತು. ಬಿಜೆಪಿಯವರು ಗೃಹಲಕ್ಷ್ಮೀ ಹಣದಿಂದ ಅತ್ತೆ-ಸೊಸೆ ಜಗಳವಾಡುತ್ತಾರೆ ಎಂದಿದ್ದರು. ಅತ್ತೆ-ಸೊಸೆ ಜಗಳವಾಡುತ್ತಿಲ್ಲ, ಚನ್ನಾಗಿದ್ದಾರೆ. ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರಿಗೆ ಲಾಭವಾಗಿದೆ. ಫಲಾನುಭವಿಗಳ ಮಾತು ಕೇಳಿ ತೃಪ್ತಿಯಾಯಿತು. ಯಾವುದೇ ಕಾರಣಕ್ಕೂ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.