ಕೋಲಾರ: ಬೊಲೆರೋ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್.ವಡ್ಡಹಳ್ಳಿ ಬಳಿ ನಡೆದಿದೆ.
ಬೊಲೆರೋ ವಾಹನ 3 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ. ಕೋನಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ಪತ್ನಿ ಅಲುವೇಲಮ್ಮ (30) ಹಾಗೂ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ಕೂಲಿ ಕೆಲಸದಿಂದ ವಾಪಾಸ್ ಆಗುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.