ಬೆಳಗಾವಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ niಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು ಮಂಗಳೂರು, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲಿ 70,000ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಇವೆ. ಪ್ರಕರಣಗಳ ಶೀಘ್ರ ಇತ್ಯರ್ಥಕ್ಕಾಗಿ ಮಂಗಳೂರಿನಲ್ಲಿ ಹೈಕೋರ್ಟ್ ವೀಭಾಗೀಯ ಪೀಠ ಸ್ಥಾಪಿಸಬೇಕೆಂದು ಮನವಿ ಮಾಡಲಾಗಿದೆ.
ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರಿಗೂ ಮಂಗಳೂರಿನಲ್ಲಿ ಹೈಕೋರ್ಟ್ ವಿಭಾಗೀಯ ಪೀಠ ಸ್ಥಾಪಿಸಬೇಕೆಂದು ನಿಯೋಗದಿಂದ ಮನವಿ ಸಲ್ಲಿಸಲಾಗಿದೆ.
ನಿಯೋಗದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ಐವನ್ ಡಿಸೋಜ, ಮಂಗಳೂರು ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.