HomeKarnatakaBIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ...

BIG NEWS : 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ನಾಳೆಯಿಂದ 2 ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ.!

ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ ಕಲ್ಪಿಸಲು ಉದ್ದೇಶಿರುವುದರಿಂದ ಡಿಸೆಂಬರ್ 20, 21ರಂದು ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಮ್ಮೇಳನದಲ್ಲಿ ಅನುಕೂಲವಾಗುವಂತೆ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ರಜೆ ಅವಧಿಯನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಪಾಠ ಪ್ರವಚನ ನಡೆಸಿ ಸರಿದೂಗಿಸುವಂತೆ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular