HomeKarnatakaಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಶುಭ ಸುದ್ದಿ: 8 ಸಾವಿರ ಮಹಿಳೆಯರು ಸೇರಿ 12,699 ಪೌರಕಾರ್ಮಿಕರ ನೇಮಕಾತಿ ಕಾಯಂ

ಬೆಂಗಳೂರು: ಬಿಬಿಎಂಪಿ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದೆ. ಕಾಯಂಗೊಂಡಿರುವ 12 ಸಾವಿರ ಹುದ್ದೆಗಳಲ್ಲಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಬಿಬಿಎಂಪಿಯಲ್ಲಿ ಗುತ್ತಿಗೆ ಹಾಗೂ ನೇರ ಪಾವತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಎರಡು ಹಂತದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಒಟ್ಟು 14,980 ಪೌರಕಾರ್ಮಿಕರ ಕಾಯಂಗೊಳಿಸಲು ಅಧಿಸೂಚನೆ ಹೊರಡಿಸಲಾಗಿದ್ದು, ಅವುಗಳಲ್ಲಿ 12,699 ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಇದರಲ್ಲಿ ಸುಮಾರು 8000 ಮಹಿಳಾ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಶೀಘ್ರದಲ್ಲಿಯೇ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತ ಮಂಜುನಾಥ ಸ್ವಾಮಿ ಮಾಹಿತಿ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular