ಮುಂಬೈನ ಗೇಟ್ವೇ ಆಫ್ ಇಂಡಿಯಾ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು 13 ಮಂದಿ ಸಾವನ್ನಪ್ಪಿದ್ದಾರೆ.ಘಟನೆಯ ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ಭಾರಿ ವೈರಲ್ ಆಗಿದೆ.
ಮುಂಬೈ ಬಂದರಿನಲ್ಲಿ ಇಂಜಿನ್ ಟ್ರಯಲ್ಸ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯ ನೌಕೆ ನಿಯಂತ್ರಣ ಕಳೆದುಕೊಂಡು ಪ್ಯಾಸೆಂಜರ್ ಬೋಟ್ ಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಬೋಟ್ ಗೆ ಡಿಕ್ಕಿ ಹೊಡೆದು ದೋಣಿ ಮಗುಚಿದೆ. ಸಮುದ್ರದಲ್ಲಿ ಮುಳುಗಿ 13 ಜನ ಸಾವನ್ನಪ್ಪಿದ್ದಾರೆ. 101 ಜನರನ್ನು ರಕ್ಷಣೆ ಮಾಡಲಾಗಿದೆ.
ಮೂವರು ನೌಕಾಪಡೆ ಸಿಬ್ಬಂದಿ ಸೇರಿದ್ದಾರೆ. ಗೇಟ್ವೇ ಆಫ್ ಇಂಡಿಯಾದಿಂದ ಎಲಿಫೆಂಟಾ ದ್ವೀಪಕ್ಕೆ ದೋಣಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.
Shocking Video: लाइव वीडियो: मुंबई में इंडिया गेट के पास की घटना
एक स्पीडबोट ने तेज गति से दूसरी नाव को टक्कर मार दी
नाव पर 60 यात्री सवार थे।#MUMBAI #BOAT pic.twitter.com/juabBdwgWa
— Jaimin Vanol (@VanolJaimin99) December 18, 2024