ಬೆಳಗಾವಿ : ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದರು.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದಲ್ಲಿ ಅಧಿವೇಶನದಲ್ಲಿ ಮಾತನಾಡಿದ ಸಚಿವರು ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, ಪ್ರಕರಣಗಳಲ್ಲಿನ ನ್ಯೂನತೆಗಳನ್ನು ಶೀಘ್ರವಾಗಿ ಸರಿಪಡಿಸಿಕೊಂಡು ವಿಳಂಬವಿಲ್ಲದೆ ಪೋಡಿ ದುರಸ್ತಿ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಬಹು ಮಾಲೀಕತ್ವದ ಖಾಸಗಿ ಒಡೆತನದ ಪಹಣಿಗಳನ್ನು ಏಕವ್ಯಕ್ತಿ ಪಹಣಿಗಳನ್ನಾಗಿ ಮಾಡುವ ಉದ್ದೇಶದ ಪೋಡಿ ಮುಕ್ತ ಯೋಜನೆಯಡಿ ರಾಜ್ಯದಲ್ಲಿ ಈಗಾಗಲೇ 16,644 ಗ್ರಾಮಗಳನ್ನು ಪೋಡಿ ಮುಕ್ತ ಗ್ರಾಮಗಳಾಗಿ ಮಾಡಲಾಗಿದೆ. ಭೂ ಮಾಪನ ಇಲಾಖೆಯಲ್ಲಿ ಕಳೆದ 3 ವರ್ಷಗಳಲ್ಲಿ ವಿವಿಧ ರೀತಿಯ 6,62,825 ಪೋಡಿ ಅರ್ಜಿಗಳನ್ನು ಸ್ವೀಕರಿಸಿದ್ದು, ಅದರಲ್ಲಿ 5,33,545… pic.twitter.com/UG8Ok3dQg3
— DIPR Karnataka (@KarnatakaVarthe) December 18, 2024