HomeKarnatakaBIG NEWS : ರಾಜ್ಯ ಸರ್ಕಾರದಿಂದ 'ಮಾಜಿ ಸೈನಿಕ'ರಿಗೆ ಗುಡ್ ನ್ಯೂಸ್ : ಶೀಘ್ರವೇ ನಿವೇಶನ...

BIG NEWS : ರಾಜ್ಯ ಸರ್ಕಾರದಿಂದ ‘ಮಾಜಿ ಸೈನಿಕ’ರಿಗೆ ಗುಡ್ ನ್ಯೂಸ್ : ಶೀಘ್ರವೇ ನಿವೇಶನ ನೀಡಲು ಕ್ರಮ.!

ಬೆಂಗಳೂರು : ರಾಜ್ಯ ಸರ್ಕಾರದಿಂದ ಮಾಜಿ ಸೈನಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಿವೇಶನ ನೀಡಲು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಉತ್ತರ ನೀಡಿದರು.

ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ ಕೂಡಲೇ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಮಾಜಿ ಸೈನಿಕರ ಕುರಿತಂತೆ ಗೌರವ ಮತ್ತು ಅಭಿಮಾನವಿದೆ. ರಾಜ್ಯದಲ್ಲಿ ಪ್ರಸ್ತುತ 16065 ಮಾಜಿ ಸೈನಿಕರು ಭೂ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದು, ಅದರಲ್ಲಿ 6,783 ಅರ್ಜಿ ವಿಲೇವಾರಿ ಮಾಡಿದ್ದು, 9,282 ಅರ್ಜಿಗಳು ಬಾಕಿ ಇವೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಉತ್ತರ ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular