ಬೆಳಗಾವಿ: ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
ವಿಧಾನಪರಿಷತ್ ನಲ್ಲಿ ಸದಸ್ಯ ನಂಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಾಲಿನ ಪ್ರೋತ್ಸಾಹ ಧನಕ್ಕೆ ನಿಗದಿಯಾಗಿದ್ದ 1300 ಕೋಟಿ ರೂ.ಗಳಲ್ಲಿ ಈಗಾಗಲೇ 1224 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿನ ಬಾಕಿ ಉಳಿಸಿಕೊಂಡಿದ್ದ 700 ಕೋಟಿ ರೂ.ಗಳನ್ನು ಹಂತ ಹಂತವಾಗಿ ನಾವು ತೀರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಹಾಲು ಉತ್ಪಾದಕರಿಗೆ ಹಾಲಿನ ಪ್ರೋತ್ಸಾಹ ಧನವನ್ನು ಈಗಾಗಲೇ ಮೂರು ಕಂತುಗಳಲ್ಲಿ ಬಿಡುಗಡೆ ಮಾಡಲಾಗಿದ್ದು, ನಾಲ್ಕನೇ ಕಂತಿನೊಳಗೆ ಬಾಕಿ ಇರುವ ಎಲ್ಲಾ ಹಣವನ್ನು ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.