ಬೆಂಗಳೂರು: ಬೆಂಗಳೂರಿನ ಐಐಎಸ್ ಸಿ ಕ್ಯಾಂಪಸ್ ನಿಂದ ವಿದ್ಯಾರ್ಥಿಯೋರ್ವ ನಿಗೂಢವಾಗಿ ನಾಪತ್ತೆಯಾಗಿದ್ದಾನೆ. ಇದ್ದಕ್ಕಿದ್ದಂತೆ ವಿದ್ಯಾರ್ಥಿ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಅನ್ಮೋಲ್ ಗಿಲ್ ನಾಪತ್ತೆಯಾಗಿರುವ ವಿದ್ಯಾರ್ಥಿ. ಬೆಂಗಳೂರಿನ ಯಶವಂತಪುರ ಬಳಿ ಇರುವ ಐಐಎಸ್ ಸಿಯಲ್ಲಿ ಎಂಟೆಕ್ ವ್ಯಾಸಂಗ ಮಾಡುತ್ತಿದ್ದ. ಡಿಸೆಂಬರ್ 16ರಿಂದ ಐಐಎಸ್ಸಿ ಕ್ಯಾಂಪಸ್ ನಿಂದ ಏಕಾಏಕಿ ನಾಪತ್ತೆಯಾಗಿದ್ದಾನೆ.
ಇದ್ದಕ್ಕಿದ್ದಂತೆ ವಿದ್ಯಾರ್ಥಿ ಎಲ್ಲಿಗೆ ಹೋಗಿದ್ದಾನೆ, ಏನಾಗಿದ್ದಾನೆ ಎಂಬ ಬಗ್ಗೆಯೂ ಸುಳಿವು ಸಿಗುತ್ತಿಲ್ಲ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ಮಿಸ್ಸಿಂಗ್ ಕೇಸ್ ದಾಖಲಾಗಿದ್ದು, ವಿದ್ಯಾರ್ಥಿ ಪತ್ತೆಗಗೈ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.