ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ಪುರ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಇಬ್ಬರು ಮಕ್ಕಳು ಸೇರಿದ್ದಾರೆ. ಇತರ ಐವರಿಗೆ ಗಾಯಗಳಾಗಿದ್ದು, ಅವರನ್ನು ಮದನ್ಪುರದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ, ಅಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿಯ ಪ್ರಕಾರ, ಕಾಂಟ್ನ ನವಾಡಾ ನಾಗ್ಲಾ ಬನ್ವಾರಿ ಗ್ರಾಮದ ನಿವಾಸಿ ರಿಯಾಸತ್ ಅಲಿ ಬಟ್ಟೆ ವ್ಯಾಪಾರಿಯಾಗಿದ್ದರು. ಅವರು ಕಳೆದ ಹಲವಾರು ದಿನಗಳಿಂದ ಗ್ರಾಮದಲ್ಲಿ ವಾಸಿಸುತ್ತಿದ್ದರು. ಬುಧವಾರ ರಾತ್ರಿ ಅವರು ತಮ್ಮ ಕುಟುಂಬದೊಂದಿಗೆ ಶಹಜಹಾನ್ಪುರದಿಂದ ದೆಹಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರಲ್ಲಿ ರಿಯಾಸತ್, ಅವರ ಪತ್ನಿ ಅಮ್ನಾ ಬೇಗಂ, ಅವರ ಪುತ್ರರಾದ ಸುಭಾನ್ ಮತ್ತು ಅಮೀರ್, ಪುತ್ರಿಯರಾದ ಖುಷಿ ಮತ್ತು ಗುಡಿಯಾ ಇದ್ದರು. ಕಾರಿನ ಚಾಲಕ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.