ಮಂಡ್ಯ : ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಜ್ಜಾಗಿದ್ದು, ನಾಳೆ ಬೆಳಗ್ಗೆ 10 : 20 ಕ್ಕೆ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯದಲ್ಲಿ ನಾಳೆಯಿಂದ ಮೂರು ದಿನ ನಡೆಯಲಿದೆ. ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ 10:20 ಕ್ಕೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ.ರು ಚನ್ನಬಸಪ್ಪ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಆಗಮಿಸುವ ಸಾಹಿತ್ಸಾಸಕ್ತರು ಹಾಗೂ ನೋಂದಣಿ ಮಾಡಿಕೊಂಡಿರುವ ಪ್ರತಿನಿಧಿಗಳಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆ, ಮೂಲ ಸೌಲಭ್ಯ ಕಲ್ಪಿಸಲು ಉದ್ದೇಶಿರುವುದರಿಂದ ಡಿಸೆಂಬರ್ 20, 21ರಂದು ಎರಡು ದಿನಗಳ ಕಾಲ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾಕ್ಟರ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸಮ್ಮೇಳನದಲ್ಲಿ ಅನುಕೂಲವಾಗುವಂತೆ ಎರಡು ದಿನಗಳ ಕಾಲ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ರಜೆ ಅವಧಿಯನ್ನು ಮುಂದಿನ ಸರ್ಕಾರಿ ರಜಾ ದಿನಗಳಲ್ಲಿ ಪಾಠ ಪ್ರವಚನ ನಡೆಸಿ ಸರಿದೂಗಿಸುವಂತೆ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ೨೦೨೪ರ ೨೦,೨೧ ಮತ್ತು ೨೨ ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ ೧೦.೨೦ಕ್ಕೆ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಬನ್ನಿ, ನಾವೆಲ್ಲರೂ ಜೊತೆಗೂಡಿ ಕನ್ನಡ ಹಬ್ಬವನ್ನು ಸಂಭ್ರಮಿಸೋಣ. #ಕನ್ನಡ_ಸಾಹಿತ್ಯ_ಸಮ್ಮೇಳನ@CMofKarnataka… pic.twitter.com/lSHk8H9tPP
— DIPR Karnataka (@KarnatakaVarthe) December 19, 2024