HomeIndiaBIG NEWS: ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಮೊಣಕಾಲಿಗೆ ಗಾಯವಾಗಿದೆ: ಸ್ಪೀಕರ್ ಗೆ ದೂರು ನೀಡಿದ...

BIG NEWS: ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಮೊಣಕಾಲಿಗೆ ಗಾಯವಾಗಿದೆ: ಸ್ಪೀಕರ್ ಗೆ ದೂರು ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ ಸಂಸತ್ ಭವನದ ಆವರಣದಲ್ಲಿ ಒಂದೆಡೆ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ್ದರೆ, ಇನ್ನೊಂದೆಡೆ ಕಾಂಗ್ರೆಸ್ ವಿರುದ್ಧ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಎಅರಡೂ ಪಕ್ಷಗಳ ಸಂಸದರ ನಡುವೆ ನೂಕಾಟ ತಳ್ಳಾಟ ನಡೆದಿದ್ದು, ಹಲವು ಸಂದರು ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.

ಪ್ರತಿಭಟನೆ ವೇಳೆ ಸಂಸತ್ ಮೆಟ್ಟಿಲುಗಳ ಬಳಿ ಬಿದ್ದ ಸಂಸದ ಪ್ರತಾಪ್ ಸಾರಂಗಿ, ರಾಹುಲ್ ಗಾಂದಿ ನನ್ನನ್ನು ತಳ್ಳಿದ್ದರಿಂದ ಬಿದ್ದು ಗಾಯಗೊಡಿದ್ದಾಗಿ ಆರೋಪಿಸಿದ್ದರು. ಇದೇ ವೇಳೆ ಸ್ಪಷ್ಟನೆ ನೀಡಿದ್ದ ರಾಹುಲ್ ಗಾಂಧಿ ನಾನು ಯಾರನ್ನೂ ತಳ್ಳಿಲ್ಲ, ಬಿಜೆಪಿ ಸಂಸದರು ನಮಗೆ ಸಂಸತ್ ಒಳಗೆ ಪ್ರವೇಶಿಸಲು ಬಿಡದೇ ತಡೆದಿದ್ದಾರೆ, ಬೆದರಿಕೆ ಹಾಕಿದ್ದಾರೆ ಎಂದು ತಿಳಿಸಿದ್ದರು.

ಈ ಘಟನೆಗಳ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಸಂಸದರು ತಳ್ಳಿದ್ದರಿಂದ ನನ್ನ ಕಾಲಿಗೂ ಗಾಯಗಳಾಗಿವೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸಂಸದರು ವಿಪಕ್ಷಗಳಿಗೆಸಂಸತ್ ಒಳಗೆ ಪ್ರವೇಶಿಸಲು ಬಿಡುತ್ತಿಲ್ಲ. ಪ್ರತಿಭಟನೆ ವೇಳೆ ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ. ಸಂಸತ್ ದ್ವಾರ ಪ್ರವೇಶಿಸುವಾಗ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ. ಇದರಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನನ್ನ ಮೊಣಕಾಲಿಗೆ ಗಾಯವಾಗಿದೆ. ಈ ವೇಳೆ ಕಾಂಗ್ರೆಸ್ ಸಂಸದರು ಕುರ್ಚಿ ತಂದು ತಂದು ನನ್ನನ್ನು ಕೂರಿಸಿದರು. ಸಹೋದ್ಯೋಗಿಗಳ ಮೂಲಕ ನಾನು ಸದನಕ್ಕೆ ಕುಮ್ಟುತ್ತಾ ಬಂದಿದ್ದೇನೆ. ಈ ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.

ಇದು ವೈಯಕ್ತಿಕವಾಗಿ ನನ್ನ ಮೇಲೆ ಮಾತ್ರವಲ್ಲ, ವಿಪಕ್ಷದ ನಾಯಕ, ಕಾಂಗ್ರೆಸ್ ಅಧ್ಯಕ್ಷರ ಮೇಲೂ ಹಲ್ಲೆಯಾಗಿದೆ ಎಂದು ದೂರಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular