ಶಿವಮೊಗ್ಗ : ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಡಿ. 29 ರೊಳಗಾಗಿ ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೇವಾಸಿಂಧು https://sevasindhu.karantaka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆಗೆ ಇಚ್ಛಿಸಿದ್ದಲ್ಲಿ ನೇರವಾಗಿ ವೆಬ್ಸೈಟ್ https://swdcorp.karnataka.gov.in/ADCLPortal ರಲ್ಲಿ ಬದಲಾವಣೆ ಮಾಡಬಹುದಾಗಿದೆ ಅಥವಾ ಸಂಬಂಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ.
 ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 
			 
		 
		 
		 
		 Loading ...
 Loading ... 
		 
		 
		