ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಸದಸ್ಯ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ ಹಾಗೇ ಹೇಳಿದ್ದಾರೆ ಎಂದರೆ ನಾನು ನಂಬಲ್ಲ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ ಹಾಗೆ ಹೇಳಿದ್ದಾರೆ ಎಂದರೆ ನಾನು ನಂಬಲ್ಲ, ಒಪ್ಪುವುದೂ ಇಲ್ಲ. ಆ.ರಿ.ಪದ ಸಿ.ಟಿ.ರವಿ ಬಾಯಲ್ಲಿ ಬಂದಿದೆ ಎಂದರೆ ಒಪ್ಪಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಿ.ಟಿ ರವಿ ಸದನದಲ್ಲಿ ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ನೋಡಿಕೊಂಡು ಪ್ರತಿಕ್ರಿಯಿಸುತ್ತೇನೆ. ಆದರೆ ಅವರು ಹಾಗೆ ಹೇಳಿದ್ದಾರೆ ಎಂದರೆ ನಾನು ನಂಬಲ್ಲ ಎಂದು ಹೇಳಿದರು.