ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಸಿಡಿದೆದ್ದಿದ್ದಾರೆ. ಸಿ.ಟಿ.ರವಿ ವಿರುದ್ಧ ಸುವರ್ಣಸೌಧ ಮೊಗಸಾಲೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬೆಳಗಾವಿಯ ಸುವರ್ಣಸೌಧದ ಮೊಗಸಾಲೆಯಲ್ಲಿ ನಡೆದು ಹೋಗುತ್ತಿದ್ದ ಸಿ.ಟಿ.ರವಿ ಅವರ ಮೇಲೆ ಲಕ್ಷ್ಮೀ ಹೆಬ್ಬಾಳಕರ್ ಬೆಂಬಲಿಗರು ಏಕಾಏಕಿ ಹಲ್ಲೆಗೆ ಯತ್ನಿಸಿದ್ದಾರೆ. ಏಕಏಕಿ ಸುಇವರ್ಣಸೌಧ ಮೊಗಸಾಲೆಗೆ ನುಗ್ಗಿದ ನೂರಾರು ಬೆಂಬಲಿಗರು, ಸಿ.ಟಿ.ರವಿ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.
ತಕ್ಷಣ ಮಧ್ಯಪ್ರವೇಶ ಮಾಡಿದ ಪೊಲೀಸರು ಹಲ್ಲೆಯನ್ನು ತಡೆದಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ನೂರಾರು ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಸುವರ್ಣಸೌಧದ ಬಳಿ ಸಾವಿರಾರು ಸಂಖ್ಯೆಯಲ್ಲಿ ಹೆಬ್ಬಾಳಕರ್ ಬೆಂಬಲಿಗರು ನುಗ್ಗಿದ್ದು, ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.