ಚಿಕ್ಕಮಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ ರವಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಚಿಕ್ಕಮಗಳೂರಿನ ಬಸವನಹಳ್ಳಿ ರಸ್ತೆಯಲ್ಲಿರುವ ಸಿ.ಟಿ.ರವಿ ನಿವಾಸದತ್ತ ಧಾವಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಚಿಕ್ಕಮಗಳೂರು ಎಸ್ ಪಿ ವಿಕ್ರಂ ಆಮ್ಟೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.