HomeKarnatakaBREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ...

BREAKING: ಅವಾಚ್ಯ ಪದ ಬಳಕೆ ಆರೋಪ: ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಮೇರೆಗೆ ಸಿ.ಟಿ. ರವಿ ವಿರುದ್ಧ ಎಫ್ಐಆರ್

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದೆ.

ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಿ.ಟಿ. ರವಿ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಈಗಾಗಲೇ ಸಭಾಪತಿಗೆ ದೂರು ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್, ಹಿರೇ ಬಾಗೇವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕೂಡ ಸಭಾಪತಿಗೆ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಸಿ.ಟಿ. ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಹಿರೇಬಾಗೇವಾಡಿ ಠಾಣೆ ಪೊಲೀಸರಿಗೆ ತಮ್ಮದೇ ಲೆಟರ್ ಹೆಡ್ ನಲ್ಲಿ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ದೂರಿನ ಮೇರೆಗೆ ಬಿಎನ್ಎಸ್ ಕಾಯ್ದೆ 75 ಮತ್ತು 79ರ ಅಡಿಯಲ್ಲಿ ಕೇಸು ದಾಖಲಾಗಿದೆ. ಲೈಂಗಿಕ ಕಿರುಕುಳ, ಮಹಿಳೆಯ ಇಚ್ಛೆಯ ವಿರುದ್ಧ ಅಶ್ಲೀಲತೆ ತೋರುವುದು, ಮಹಿಳೆಯರ ನಮ್ರತೆ ಅವಮಾನಿಸುವ ಉದ್ದೇಶದಿಂದ ಸನ್ನೆ, ಪದ ಅಥವಾ ಕ್ರಿಯೆ, ಬಣ್ಣದ ಟೀಕೆ ಎಂಬುದು ಸೇರಿ ಬಿಎನ್ಎಸ್ ಕಾಯ್ದೆಯಡಿ ಹಿರೇ ಬಾಗೇವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

 

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular