ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಅವರ ಮೇಲೆ ಹಲ್ಲೆಗೆ ಯತ್ನ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಸುವರ್ಣಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮೇಲೆ ಕಾಂಗ್ರೆಸ್ ಗೂಂಡಾಗಳಿಂದ ಹಲ್ಲೆ ಯತ್ನ ನಡೆದಿದೆ. ಇದು ಖಂಡನೀಯ. ಸುವರ್ಣಸೌಧದಲ್ಲಿಯೇ ಜನಪ್ರತಿನಿಧಿಗಳಿಗೆ ಭದ್ರತೆ ಇಲ್ಲದಂತಾಗಿದೆ. ಇದರ ವಿರುದ್ಧ ನಾವು ಹೋರಾಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ವಿಧಾನಸೌಧದೊಳಗೆ ಹತ್ತಾರು ಗೂಂಡಾಗಳು ಹೇಗೆ ಬಂದರು? ಸಭಾಪತಿಗಳೇ ಸಾಕ್ಷ್ಯಾಧಾರದ ಬಗ್ಗೆ ತನಿಖೆಗೆ ಸೂಚಿಸಿದ್ದಾರೆ. ಹೀಗಿರುವಾಗ ಸಿ.ಟಿ. ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ನಾವು ಚರ್ಚಿಸಿ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.