alex Certify ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್: 60 ಸಾವಿರ ಹುದ್ದೆ ಖಾಲಿ ಇದ್ದರೂ ಸದ್ಯಕ್ಕಿಲ್ಲ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಶಾಕಿಂಗ್ ನ್ಯೂಸ್: 60 ಸಾವಿರ ಹುದ್ದೆ ಖಾಲಿ ಇದ್ದರೂ ಸದ್ಯಕ್ಕಿಲ್ಲ ನೇಮಕಾತಿ

ಬೆಂಗಳೂರು: ರಾಜ್ಯದಲ್ಲಿನ 46,755 ಪ್ರಾಥಮಿಕ,  ಪ್ರೌಢಶಾಲೆಗಳಲ್ಲಿ 1,65,618 ಕಾರ್ಯನಿರತ ಶಿಕ್ಷಕರ ಹುದ್ದೆಗಳಿವೆ. ಇವುಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ವಿಧಾನಸಭೆಗೆ ಸರ್ಕಾರ ತಿಳಿಸಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಪ್ರಶ್ನೋತ್ತರ ಕಲಾಪದಲ್ಲಿ ಕೆ. ಗೋಪಾಲಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ್ದಾರೆ. 2024ರ ಅಕ್ಟೋಬರ್ 28 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಹೊರಡಿಸಬಾರದು ಎಂದು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಸರ್ಕಾರ ಕೇವಲ 4500 ಶಿಕ್ಷಕರನ್ನು ನೇಮಕ ಮಾಡಿದ್ದು, ನಮ್ಮ ಸರ್ಕಾರದಲ್ಲಿ 13000 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5300 ಹುದ್ದೆಗಳ ಭರ್ತಿಗೆ ಒಪ್ಪಿಗೆ ನೀಡಲಾಗಿದೆ. 2022ರಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ 15,000 ಹುದ್ದೆಗಳ ನೇಮಕಾತಿಗೆ ಆಧಿಸೂಚನೆ ಹೊರಡಿಸಿದ್ದು, ಅರ್ಹತೆ ಪಡೆದ 13,352 ಅಭ್ಯರ್ಥಿಗಳಲ್ಲಿ 12,521 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲಾಗಿದೆ. ಉಳಿದ ಅಭ್ಯರ್ಥಿಗಳ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...