ಬೆಳಗಾವಿ : ಪರಿಷತ್ ನಲ್ಲಿ ಸಿಟಿ ರವಿ ಅಶ್ಲೀಲ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದು ‘ಲೈಂಗಿಕ ದೌರ್ಜನ್ಯ’ದಂತಹ ಪ್ರಕರಣ ಎಂದು ಹೇಳಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವಂತಹ ಸಿಎಂ ಸಿದ್ದರಾಮಯ್ಯ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ
ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ.
ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ. ಸಿ.ಟಿ.ರವಿಯವರು ಹತ್ತಕ್ಕೂ ಹೆಚ್ಚು ಬಾರಿ ಅತ್ಯಂತ ಕೀಳು ಪದದಿಂದ ನಿಂದನೆ ಮಾಡಿದ್ದಾರೆ ಎಂದು ಅಲ್ಲಿ ಸುತ್ತಲೂ ಇದ್ದ ನಮ್ಮ ಪರಿಷತ್ ಸದಸ್ಯರು ಹೇಳುತ್ತಿದ್ದಾರೆ. ರವಿಯವರ ಮಾತಿನಿಂದ ನೊಂದು ಲಕ್ಷ್ಮೀ ಹೆಬ್ಬಾಳ್ಕರ್ ಅವರು ದೂರು ದಾಖಲಿಸಿದ್ದಾರೆ. ಇದು ಲೈಂಗಿಕ ದೌರ್ಜನ್ಯದಂತಹ ಪ್ರಕರಣವಾಗಿರುವುದರಿಂದ ಪೊಲೀಸರು ಕ್ರಿಮಿನಲ್ ಪ್ರೊಸಿಜರ್ ರೀತ್ಯಾ ಕ್ರಮ ವಹಿಸುತ್ತಾರೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್ ಸದಸ್ಯ @CTRavi_BJP ಅವರು ಸಚಿವೆ @laxmi_hebbalkar ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ ಅಪರಾಧವಾಗಿದೆ. ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಭಾಪತಿಗಳಿಗೆ ಮತ್ತು ಪೊಲೀಸರಿಗೆ ದೂರು ನೀಡಿದ್ದಾರೆ. ಕಾನೂನಾತ್ಮಕವಾಗಿ ಏನು ಕ್ರಮ ಕೈಗೊಳ್ಳುತ್ತಾರೆ ನೋಡೋಣ.
ಸಿ.ಟಿ.ರವಿಯವರು ಹತ್ತಕ್ಕೂ ಹೆಚ್ಚು… pic.twitter.com/3oKP1h1CTt
— Siddaramaiah (@siddaramaiah) December 19, 2024