ಬೆಳಗಾವಿ : ಸಿಟಿ ರವಿ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಿ.ಟಿ ರವಿ ಕೇಸ್ ವರ್ಗಾವಣೆ ಆಗಿದೆ.
ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಿ.ಟಿ ರವಿ ಕೇಸ್ ವರ್ಗಾವಣೆ ಮಾಡಿ ಜಡ್ಜ್ ಡಿಸೋಜಾ ಆದೇಶ ಹೊರಡಿಸಿದ್ದಾರೆ.
MLC ‘ಸಿ.ಟಿ ರವಿ’ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಬೆಳಗಾವಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿತ್ತು, ಇದೀಗ ಈ ಪ್ರಕರಣವನ್ನೇ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ವರ್ಗಾವಣೆ ಮಾಡಲಾಗಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಸಿ ಬಂಧನಕ್ಕೊಳಗಾಗಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ JMFC ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಹೊರಡಿಸಿದೆ.ಅದೇ ರೀರಿ ಪ್ರತ್ಯೇಕ್ಷ ಸೆಕ್ಷನ್ ಗಳಡಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಗೆ ಸಿ.ಟಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯಲಿದೆ.