ಬೆಂಗಳೂರು: ಡಿಸೆಂಬರ್ 29 ರಂದು ನಡೆಯಲಿರುವ ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದೆ.
ಕನ್ನಡ ಭಾಷೆಯಲ್ಲಿನ ಯಾವುದೇ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ಗೊಂದಲವಾದಲ್ಲಿ ಇಂಗ್ಲಿಷ್ ಭಾಷೆಯ ಪ್ರಶ್ನೆಗಳನ್ನು ನೋಡಿಕೊಂಡು ಅರ್ಥೈಸಿಕೊಳ್ಳುವಬೇಕು ಎಂದು ಅಭ್ಯರ್ಥಿಗಳಿಗೆ ಕೆಪಿಎಸ್ಸಿ ಸೂಚನೆ ನೀಡಿದೆ.
ಆಗಸ್ಟ್ 27ರಂದು ನಡೆದ ಪೂರ್ವಭಾವಿ ಪರೀಕ್ಷೆಯ ಪತ್ರಿಕೆಯಲ್ಲಿ ಕನ್ನಡದಲ್ಲಿದ್ದ ಪ್ರಶ್ನೆಗಳಲ್ಲಿ ಅನೇಕ ದೋಷಗಳಿದ್ದು, ಇದರಿಂದ ಅಭ್ಯರ್ಥಿಗಳಿಗೆ ಕಷ್ಟವಾಗಿತ್ತು. ಭಾಷಾಂತರಗೊಂಡ ಪ್ರಶ್ನೆಗಳ ವಾಕ್ಯ ರಚನೆ ದೋಷಗಳಿಂದ ಕೂಡಿದ್ದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮತ್ತು ಕನ್ನಡ ಪರ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಅಂದಿನ ಪರೀಕ್ಷೆ ರದ್ದು ಮಾಡಿ ಡಿಸೆಂಬರ್ 29ಕ್ಕೆ ಮರು ಪರೀಕ್ಷೆ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಆಯೋಗದ ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ತಿಳಿಸಲಾಗಿದೆ.