ಬೆಂಗಳೂರು: ಉದ್ಯೋಗಿಗಳು, ಸರ್ಕಾರಕ್ಕೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವ ರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ ಮಾಡುವಂತೆ ಪತ್ರ ಬರೆಯಲಾಗಿದೆ.
ಪಿಎಫ್ಒ ಪ್ರಾದೇಶಿಕ ಆಯುಕ್ತ ಷಡಾಕ್ಷರಿ ಗೋಪಾಲ ರೆಡ್ಡಿ ಅವರು ಪುಲಿಕೇಶಿ ನಗರ ಪೊಲೀಸರಿಗೆ ಪತ್ರ ಬರೆದಿದ್ದಾರೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೇಟ್ ಲಿಮಿಟೆಡ್ ನಡೆಸುತ್ತಿದ್ದ ರಾಬಿನ್ ಉತ್ತಪ್ಪ ಕೆಲಸ ಮಾಡುತ್ತಿದ್ದ ಹಲವು ಉದ್ಯೋಗಿಗಳ ಪಿಎಫ್ ಹಣವನ್ನು ಖಾತೆಗೆ ಪಾವತಿಸದೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಉದ್ಯೋಗಿಗಳ ಪಿಎಫ್ ಖಾತೆಗೆ ಹಣ ಹಾಕದೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ 23 ಲಕ್ಷ ರೂ. ವಂಚನೆ ಮಾಡಿದ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪತ್ರ ಬರೆದ ಹಿನ್ನಲೆಯಲ್ಲಿ ಪೊಲೀಸರು ಕ್ರಮಕೈಗೊಂಡಿದ್ದಾರೆ. ಅಧಿಕಾರಿಗಳು ನೀಡಿದ್ದ ವಿಳಾಸದಲ್ಲಿ ರಾಬಿನ್ ಉತ್ತಪ್ಪ ವಾಸವಿಲ್ಲದಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ವಾಪಸ್ ಆಗಿದ್ದಾರೆ.