HomeBusinessGOOD NEWS: ಇಂದು ಜಿಎಸ್ಟಿ ಮಂಡಳಿ ಸಭೆ: ಆರೋಗ್ಯ, ಜೀವ ವಿಮೆ ರಿಯಾಯಿತಿ ಘೋಷಣೆ ಸಾಧ್ಯತೆ

GOOD NEWS: ಇಂದು ಜಿಎಸ್ಟಿ ಮಂಡಳಿ ಸಭೆ: ಆರೋಗ್ಯ, ಜೀವ ವಿಮೆ ರಿಯಾಯಿತಿ ಘೋಷಣೆ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್‌ಟಿ ಮಂಡಳಿ ಸಭೆ ಶನಿವಾರ ಜೈಸಲ್ಮೇರ್ ನಲ್ಲಿ ನಡೆಯಲಿದೆ.

ಆರೋಗ್ಯ ಮತ್ತು ಜೀವ ವಿಮೆ ಕಂತಿನ ಮೇಲೆ ವಿಧಿಸಲಾಗುತ್ತಿರುವ ಶೇಕಡ 18ರಷ್ಟು ಜಿಎಸ್‌ಟಿ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಜಿಎಸ್‌ಟಿ ಪರಿಷ್ಕರಣೆ ಸಂಬಂಧ ರಚಿಸಿದ್ದ ಸಚಿವರ ಸಮಿತಿಯು ಅವಧಿ ವಿಮೆ ಮತ್ತು ಹಿರಿಯ ನಾಗರಿಕರ ಆರೋಗ್ಯ ವಿಮೆ ಕಂತಿನ ಮೇಲಿನ ತೆರಿಗೆ ಹಿಂಪಡೆಯುವ ಬಗ್ಗೆ ಶಿಫಾರಸು ಮಾಡಿದೆ. ಹಿರಿಯ ನಾಗರಿಕರನ್ನು ಹೊರತುಪಡಿಸಿ ವೈಯಕ್ತಿಕ ವಿಮೆದಾರರ 5 ಲಕ್ಷ ರೂ. ಒಳಗಿನ ಆರೋಗ್ಯ ವಿಮಾ ಕಂತಿನ ಮೇಲೆ ತೆರಿಗೆ ವಿನಾಯಿತಿ ನೀಡಲು ವರದಿ ನೀಡಲಾಗಿದೆ. ಈ ಶಿಫಾರಸುಗಳಿಗೆ ಜಿಎಸ್‌ಟಿ ಮಂಡಳಿ ಸಭೆ ಅಂಕಿತ ಹಾಕುವ ಸಾಧ್ಯತೆ ಇದೆ.

ದುಬಾರಿ ಮೌಲ್ಯದ ಕೈಗಡಿಯಾರ, ಶೂ ಮತ್ತು ಉಡುಪುಗಳ ಮೇಲಿನ ಜಿಎಸ್‌ಟಿ ಹೆಚ್ಚಳಕ್ಕೆ ಶಿಫಾರಸು ಮಾಡಿದ್ದು, ಇದಕ್ಕೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ. ಆನ್ಲೈನ್ ಮೂಲಕ ಆಹಾರ ಪೂರೈಸುವ ಸ್ವಿಗ್ಗಿ ಮತ್ತು ಜೊಮ್ಯಾಟೋ ಆಹಾರ ವಿತರಣೆಯ ಮೇಲೆ ಶೇಕಡ 18ರಷ್ಟು ಜಿಎಸ್‌ಟಿ ವಿಧಿಸುತ್ತಿದ್ದು, ಇದನ್ನು ಶೇಕಡ 5ಕ್ಕೆ ಕಡಿತಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular