ಬೆಂಗಳೂರು : ವಿರಾಟ್ ಕೊಹ್ಲಿಸಹ ಮಾಲೀಕತ್ವದ ಬೆಂಗಳೂರಿನ ಬಾರ್ & ಪಬ್ ಗೆ ಬಿಬಿಎಂಪಿ ನೋಟಿಸ್ ನೀಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇರುವ ಬೆಂಗಳೂರಿನ ಬಾರ್ & ಪಬ್ ಗೆ ಬಿಬಿಎಂಪಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಫೈರ್ ಸೇಫ್ಟಿ NOC ಪಡೆಯದ ಹಿನ್ನೆಲೆ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ಕೊಹ್ಲಿ ಮಾಲೀಕತ್ವದ ಒನ್ 8 ಕಮ್ಯೂನ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ನೋಟಿಸ್ ನೀಡಲಾಗಿದ್ದು, ಬಾರ್ ನಲ್ಲಿ ಅಗ್ನಿ ಸುರಕ್ಷತೆ ಅಳವಡಿಸಿಲ್ಲ ಹಾಗೂ ಅಗ್ನಿಶಾಮಕ ದಳದ ಪ್ರಮಾಣ ಪತ್ರ ಪಡೆಯದೇ ಕಾನೂನು ಉಲ್ಲಂಘಿಸಿದ್ದಕ್ಕೆ ನೋಟಿಸ್ ನೀಡಲಾಗಿದೆ.ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವವರು ಪಾಲಿಕೆಗೆ ದೂರು ನೀಡಿದ್ದರು. ದೂರು ಆಧರಿಸಿ ಶಾಂತಿನಗರ ಪಾಲಿಕೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.