ಚಿಕ್ಕಮಗಳೂರು : ಸಿಟಿ ರವಿ ಬಂಧನ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಲವಂತವಾಗಿ ಅಂಗಡಿ ಮುಂಗಟ್ಟು ಮುಚ್ಚಿಸಿದ ಹಿನ್ನೆಲೆ ಹಾಗೂ ಟೈರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಹಿನ್ನೆಲೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ ಸಿಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ನಿನ್ನೆ ವಶಕ್ಕೆ ಪಡೆದುಕೊಂಡಿದ್ದಾರೆ.ಹನುಮಂತಪ್ಪ ಸರ್ಕಲ್ ಬಳಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಲಾಗಿತ್ತು. ಎಲ್ಲಾ ಹೈ ಡ್ರಾಮಾಗಳ ಬಳಿಕ ಸಿಟಿ ರವಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.