HomeKarnatakaBREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ...

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ : ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯ ಬರ್ಬರ ಹತ್ಯೆ.!

ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮನೆಗೆ ನುಗ್ಗಿ  9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದವರನ್ನು ಸುವರ್ಣ ಮಠಪತಿ (33) ಎಂದು ಗುರುತಿಸಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕೊಡ ಗ್ರಾಮದಲ್ಲಿ ಘಟನೆ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ದುಷ್ಕರ್ಮಿಗಳು ಸುವರ್ಣ ಮಠಪತಿ (33) ಹೊಟ್ಟೆಗೆ ಒದ್ದು ಆಯುಧಗಳಿಂದ ಹೊಡೆದುಬರ್ಬರವಾಗಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯಾವುದಾದರೂ ದ್ವೇಷಕ್ಕೆ ಈ ಕೊಲೆ ನಡೆದಿರಬಹುದೆಂದು ಶಂಕಿಸಲಾಗಿದೆ. ಅಥಣಿ ಪೊಲೀಸರು 2 ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular