HomeKarnatakaBREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು ಒಂದೇ...

BREAKING : ಬೆಂಗಳೂರಿನಲ್ಲಿ ಭೀಕರ ಅಪಘಾತ : ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು ಒಂದೇ ಕುಟುಂಬದ 6 ಮಂದಿ ಅಪ್ಪಚ್ಚಿ..!

ಬೆಂಗಳೂರು : ಕಾರಿನ ಮೇಲೆ ಕಂಟೇನರ್ ಲಾರಿ ಬಿದ್ದು ದುರಂತ ಸಂಭವಿಸಿದ್ದು, ಒಂದೇ ಕುಟುಂಬದ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಾಳೆಕೆರೆ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಮೃತರು ವಿಜಯಪುರ ಮೂಲದ ಎಂಜಿನಿಯರ್ ಕುಟುಂಬದವರು ಎಂದು ಗುರುತಿಸಲಾಗಿದೆ. ಲಾರಿಯಡಿ ಮಕ್ಕಳು ಸೇರಿ 6 ಮಂದಿ ಅಪ್ಪಚ್ಚಿಯಾಗಿದ್ದಾರೆ.

ಲಾರಿಗಳ ನಡುವೆ ಅಪಘಾತ ಸಂಭವಿಸಿ ಕಾರಿನ ಮೇಲೆ ಲಾರಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತ ಹಿನ್ನೆಲೆ ಘಟನೆ ನಡೆದ ಸ್ಥಳದಿಂದ 3 ಕಿ.ಮೀವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಸಾಹಸ ಪಟ್ಟು ಪೊಲೀಸರು ಸತತ 1 ಗಂಟೆ ಕಾರ್ಯಾಚರಣೆ ನಡೆಸಿ ಅಪ್ಪಚ್ಚಿಯಾದ ಶವಗಳನ್ನು ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular