ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಅಡಿ ಸೌಲಭ್ಯಕ್ಕಾಗಿ ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು 2025 ರ ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಡಿ.ದೇವರಾಜು ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.