HomeIndiaBIG UPDATE : ಮುಂಬೈ ಗೇಟ್ ವೇ ದೋಣಿ ದುರಂತ : 7 ವರ್ಷದ ಬಾಲಕನ...

BIG UPDATE : ಮುಂಬೈ ಗೇಟ್ ವೇ ದೋಣಿ ದುರಂತ : 7 ವರ್ಷದ ಬಾಲಕನ ಶವ ಪತ್ತೆ, ಸಾವಿನ ಸಂಖ್ಯೆ 15ಕ್ಕೆ ಏರಿಕೆ.!

ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ನೌಕಾ ಹಡಗು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 15 ಕ್ಕೆ ಏರಿಕೆಯಾಗಿದೆ.

ಡಿಸೆಂಬರ್ 18 ರಂದು ಮುಂಬೈ ಕರಾವಳಿಯಲ್ಲಿ ಪ್ರವಾಸಿ ದೋಣಿ-ಭಾರತೀಯ ನೌಕಾಪಡೆಯ ದೋಣಿ ಅಪಘಾತದ ನಂತರ ಕಾಣೆಯಾಗಿದ್ದ ಏಳು ವರ್ಷದ ಬಾಲಕನ ಶವ ಶನಿವಾರ ಪತ್ತೆಯಾಗಿದೆ. ಅಪಘಾತದಲ್ಲಿ ಮೃತಪಟ್ಟ ಬಾಲಕನನ್ನು ಜೋಹಾನ್ ಪಠಾಣ್ ಎಂದು ಗುರುತಿಸಲಾಗಿದ್ದು, ಅವರ ತಾಯಿ ಕೂಡ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮುಂಬೈ ಬಂದರಿನಲ್ಲಿ ಇಂಜಿನ್ ಟ್ರಯಲ್ಸ್ ನಡೆಸುತ್ತಿದ್ದಾಗ ಘಟನೆ ನಡೆದಿದೆ. ಭಾರತೀಯ ನೌಕಾಪಡೆಯ ನೌಕೆ ನಿಯಂತ್ರಣ ಕಳೆದುಕೊಂಡು ಪ್ಯಾಸೆಂಜರ್ ಬೋಟ್ ಗೆ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ ಬೋಟ್ ಗೆ ಡಿಕ್ಕಿ ಹೊಡೆದು ದೋಣಿ ಮಗುಚಿದೆ. ಸಮುದ್ರದಲ್ಲಿ ಮುಳುಗಿ 15 ಜನ ಸಾವನ್ನಪ್ಪಿದ್ದಾರೆ. 101 ಜನರನ್ನು ರಕ್ಷಣೆ ಮಾಡಲಾಗಿದೆ.ಏಳು ವರ್ಷದ ಬಾಲಕನ ಶವ ಪತ್ತೆಯಾಗುವುದರೊಂದಿಗೆ, ಡಿಸೆಂಬರ್ 18 ರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಗುರುವಾರ 43 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular