HomeKarnataka‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಹಾಡಿದ, ಕರ್ನಾಟಕ ಏಕೀಕರಣದ ಮೊದಲ ಧ್ವನಿ ಪ್ರತಿಪಾದಿಸಿದ ಬೆಳಗಾವಿ...

‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಹಾಡಿದ, ಕರ್ನಾಟಕ ಏಕೀಕರಣದ ಮೊದಲ ಧ್ವನಿ ಪ್ರತಿಪಾದಿಸಿದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಿದ್ಧತೆಗೆ ಸಿಎಂ ಸೂಚನೆ

ಬೆಂಗಳೂರು: ಡಿಸೆಂಬರ್ 26 ಮತ್ತು 27ರಂದು ಬೆಳಗಾವಿಯಲ್ಲಿ ನಡೆಯುವ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ.

ಶತಮಾನೋತ್ಸವ ಆಚರಣೆ ಸಂಬಂಧವಾಗಿ ರಚಿಸಲಾಗಿರುವ ಸಚಿವರು ಹಾಗೂ ಸಂಸತ್‌ ಸದಸ್ಯರನ್ನು ಒಳಗೊಂಡ ವಿವಿಧ ಸಮಿತಿಗಳು ಕೈಗೊಂಡ ಸಿದ್ಧತೆಗಳ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಬೆಳಗಾವಿಯಲ್ಲಿ ಎರಡು ದಿನಗಳ ಸಮಾರಂಭದ ಮೂಲಕ ಶತಮಾನೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಪ್ರಥಮ ದಿನ ಡಿಸೆಂಬರ್ 26ರಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, 27ರಂದು ಸಾರ್ವಜನಿಕ ಸಮಾರಂಭ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶತಮಾನೋತ್ಸವ ಸಮಾರಂಭಕ್ಕೆ ರಾಷ್ಟ್ರದೆಲ್ಲೆಡೆಯಿಂದ ಆಗಮಿಸಲಿರುವ ಸಂಸದರು, ಗಣ್ಯರಿಗೆ ವಸತಿ, ಊಟೋಪಚಾರ ಸೇರಿದಂತೆ ಸೂಕ್ತ ಆತಿಥ್ಯ ವ್ಯವಸ್ಥೆ ಕಲ್ಪಿಸುವುದು ಸಂಬಂಧಿಸಿದ ಸಮಿತಿಗಳ ಕೆಲಸ.

ಡಿಸೆಂಬರ್ 27ರಂದು ಸುವರ್ಣಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ ನೆರವೇರಿಸುವ ಹಾಗೂ ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವ ಬಗ್ಗೆ ನಿರ್ಧರಿಸಲಾಗಿದೆ.

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ಹಾಡನ್ನು ಪ್ರಥಮ ಬಾರಿಗೆ ಗಂಗೂಬಾಯಿ ಹಾನಗಲ್ ಅವರು ಹಾಡಿದ್ದರು. ಈಗ ಅದಕ್ಕೂ ನೂರು ವರ್ಷಗಳು ಸಂದ ಹಿನ್ನೆಲೆಯಲ್ಲಿ ಆ ಹಾಡನ್ನು ಪುನಃ ಶತಮಾನೋತ್ಸವ ಆಚರಣೆಯಲ್ಲಿ  ಹಾಡಿಸುವ ಕುರಿತು ತೀರ್ಮಾನಿಸಲಾಯಿತು.

ಮಹಾತ್ಮಾ ಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಏಕೀಕರಣದ ಮೊದಲ ಧ್ವನಿ ಬಲವಾಗಿ ಪ್ರತಿಪಾದಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶ ಕನ್ನಡಿಗರ ಪಾಲಿಗೂ ಮಹತ್ವದ್ದಾಗಿದೆ ಎಂದು ಸಿಎಂ ಹೇಳಿದ್ದಾರೆ.

ಸಭೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ್, ಹೆಚ್.ಕೆ. ಪಾಟೀಲ್, ಕೆ.ಜೆ. ಜಾರ್ಜ್ ಸೇರಿ ಹಲವರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular