ಬೆಂಗಳೂರು: ಫ್ಲೈಓವರ್ ತಡೆಗೋಡೆಗೆ ಕಾರ್ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನ ಸಿಂಗಸಂದ್ರ ಸಮೀಪ ನಡೆದಿದೆ.
ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಗೆ ತೆರಳುವ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿ ತೆರಳುತ್ತಿದ್ದ ಐವರ ಪೈಕಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಎಲೆಕ್ಟ್ರಾನಿಕ್ ಸಿಟಿ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಅತಿ ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ಸಂಪೂರ್ಣ ನಜ್ಜು ಗುಜ್ಜಾಗಿದೆ. ಪ್ರವಾಸ ಮುಗಿಸಿ ನಾಲ್ವರು ಯುವಕರು, ಓರ್ವ ಯುವತಿ ವಾಪಸ್ ಆಗುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.