alex Certify ನನಗೂ ಕಂಪನಿಗಳಿಗೂ ಸಂಬಂಧವಿಲ್ಲ: ಪಿಎಫ್ ವಂಚನೆ ಪ್ರಕರಣ ಬಗ್ಗೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಗೂ ಕಂಪನಿಗಳಿಗೂ ಸಂಬಂಧವಿಲ್ಲ: ಪಿಎಫ್ ವಂಚನೆ ಪ್ರಕರಣ ಬಗ್ಗೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ

ಬೆಂಗಳೂರು: ಕಾರ್ಮಿಕರಿಂದ ಕಡಿತಗೊಳಿಸಿದ್ದ ಪಿಎಫ್ ಹಣವನ್ನು ಸರ್ಕಾರಕ್ಕೆ ಜಮೆ ಮಾಡದೇ ವಂಚಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸ್ಪಷ್ಟನೆ ನೀಡಿದ್ದಾರೆ.

ಬಂಧನ ವಾರಂಟ್ ಜಾರಿಯಾದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕಂಪನಿಗಳಿಗೆ ಕೆಲವು ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿದ್ದೇನೆ. ಇದರಲ್ಲಿ ನನ್ನ ಪಾತ್ರವಿಲ್ಲ, ಕಂಪನಿಗಳ ಜೊತೆಗೆ ನನಗೆ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ಹಣಕಾಸಿನ ನೆರವಿನ ಕಾರಣಕ್ಕೆ 2018 -19ರಲ್ಲಿ ನಿರ್ದೇಶಕನಾಗಿ ನೇಮಕವಾಗಿದ್ದೆ. ಆದರೆ ಕಾರ್ಯನಿರ್ವಾಹಕನಾಗಿರಲಿಲ್ಲ. ಕಂಪನಿಯ ದೈನಂದಿನ ವ್ಯವಹಾರದಲ್ಲಿ ನನಗೆ ಯಾವುದೇ ಸಂಬಂಧವಿಲ್ಲ. ಈ ಕಂಪನಿಗಳು ನಾನು ಸಾಲದ ರೂಪದಲ್ಲಿ ನೀಡಿದ ಹಣ ಮರುಪಾವತಿಸುವ ವಿಫಲವಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿದೆ. ಕಂಪನಿಯ ನಿರ್ದೇಶಕ ಹುದ್ದೆಗೆ ಕೆಲವು ವರ್ಷಗಳ ಹಿಂದೆಯೇ ನಾನು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...