HomeIndia4ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ...

4ನೇ ಟೆಸ್ಟ್ ಪಂದ್ಯಕ್ಕೆ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್: ಕೆ.ಎಲ್. ರಾಹುಲ್ ಬೆನ್ನಲ್ಲೇ ಅಭ್ಯಾಸದ ವೇಳೆ ಚೆಂಡು ಬಡಿದು ರೋಹಿತ್ ಶರ್ಮಾ ಮೊಣಕಾಲಿಗೆ ಗಾಯ

ಮೆಲ್ಬೋರ್ನ್: ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಚೆಂಡು ಬಡಿದು ಭಾರತ ಕ್ರಿಕೆಟ್ ತಂಡದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಕೈಗೆ ಪೆಟ್ಟಾಗಿದೆ.

ಅವರಿಗೆ ತಂಡದ ಫಿಸಿಯೋ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಕೆ.ಎಲ್. ರಾಹುಲ್ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಬಲಗೈಗೆ ಚೆಂಡು ಬಡಿದು ಅವರು ನೋವು ಅನುಭವಿಸಿದ್ದಾರೆ. ಡಿಸೆಂಬರ್ 26 ರಿಂದ ಬಾರ್ಡರ್ –ಗವಾಸ್ಕರ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯ ನಡೆಯಲಿದೆ. ಆಸ್ಟ್ರೇಲಿಯಾ- ಭಾರತ ನಡುವಿನ ಈ ಸರಣಿ 1-1ರಲ್ಲಿ ಸಮಬಲವಾಗಿದ್ದು, ಕಳೆದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ ಕೆ.ಎಲ್. ರಾಹುಲ್ ಅವರ ಕೈಗೆ ಪೆಟ್ಟಾಗಿದೆ. ಗಾಯದ ಬಗ್ಗೆ ಇನ್ನೂ ಸ್ಪಷ್ಟವಾಗಿ ಗೊತ್ತಾಗಿಲ್ಲ. ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಇದೇ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲು ಭಾನುವಾರದಂದು ನೆಟ್ ಸೆಷನ್‌ನಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ ಅವರ ಎಡ ಮೊಣಕಾಲಿಗೆ ಪೆಟ್ಟಾಯಿತು. ರೋಹಿತ್ ಅವರು ಥ್ರೋಡೌನ್ ಸ್ಪೆಷಲಿಸ್ಟ್ ಅನ್ನು ಎದುರಿಸುತ್ತಿರುವಾಗ ಗಾಯಗೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಎಂಸಿಜಿಯಲ್ಲಿ 14 ಟೆಸ್ಟ್‌ ಗಳಲ್ಲಿ 8 ರಲ್ಲಿ ಸೋತಿದೆ ಮತ್ತು 4 ರಲ್ಲಿ ಗೆಲುವು ದಾಖಲಿಸಿದೆ. ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular