HomeKarnatakaBREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

BREAKING: ಜಗಳದ ವೇಳೆ ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಶಿವಮೊಗ್ಗ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ.

ರುಕ್ಸಾನಾ(38) ಕೊಲೆಯಾದ ಮಹಿಳೆ. ಪತಿ ಯೂಸುಫ್ ಪತ್ನಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. 12 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಎಸಿ ಮೆಕಾನಿಕ್ ಆಗಿರುವ ಯೂಸುಫ್ ಕೌಟುಂಬಿಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದು, ಜಗಳದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ತುಂಗಾ ನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರುಗಿಸಿದ್ದಾರೆ. ಆರೋಪಿ ಯೂಸುಫ್ ನನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular