HomeKarnatakaಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಪರೀಕ್ಷೆಗೆ ಅವಕಾಶ ನಿರಾಕರಿಸಿದ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ: ದೂರು, ಪ್ರತಿ ದೂರು ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ಸರ್ಕಾರಿ ಪದವಿ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜು ಅವರ ಮೇಲೆ ಹಲ್ಲೆ ನಡೆದಿದ್ದು, ದೂರು, ಪ್ರತಿ ದೂರು ದಾಖಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಮತ್ತು ಆತನ ತಂದೆಯ ವಿರುದ್ಧ ರಾಜು ದೂರು ನೀಡಿದ್ದು, ವಿದ್ಯಾರ್ಥಿಯ ಪೋಷಕರು ಪ್ರತಿ ದೂವರು ದಾಖಲಿಸಿದ್ದಾರೆ. ಹಾಜರಾತಿ ಕೊರತೆ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಿಸಿದ್ದರಿಂದ ಕೋಪಗೊಂಡ ವಿದ್ಯಾರ್ಥಿ ಮತ್ತು ಆತನ ತಂದೆ ಉಪನ್ಯಾಸಕ ರಾಜು ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.

ಹಾಜರಾತಿ ಕಡಿಮೆ ಇದ್ದ ಕಾರಣಕ್ಕೆ ಶುಕ್ರವಾರ ನಡೆದ ಇತಿಹಾಸ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಅವಕಾಶ ನಿರಾಕರಿಸಲಾಗಿತ್ತು. ತಂದೆ ವಿಜಯಕುಮಾರ್ ಜೊತೆಗೆ ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿ ರಾಜು ಅವರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಗಾಯಗೊಂಡ ರಾಜು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಶ್ನಿಸಲು ಹೋದ ನಮ್ಮ ಮೇಲೆಯೇ ಉಪನ್ಯಾಸಕ ರಾಜು ಹಲ್ಲೆ ಮಾಡಿರುವುದಾಗಿ ವಿದ್ಯಾರ್ಥಿಯ ತಂದೆ ವಿಜಯಕುಮಾರ್ ದೂರು ನೀಡಿದ್ದಾರೆ. ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular