HomeKarnatakaಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿ ಸಾವು: ಕರ್ತವ್ಯಲೋಪ ಆರೋಪದಡಿ 6 ಶಿಕ್ಷಕರು ಅಮಾನತು: ಡಿಡಿಪಿಐ ಆದೇಶ

ಕೊಪ್ಪಳ: ಶೈಕ್ಷಣಿಕ ಪ್ರವಾಸಕ್ಕೆ ಹೋಗಿದ್ದಾಗ ವಿದ್ಯಾರ್ಥಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಗಾಣದಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆರು ಜನ ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗಾಣದಾಳ ಗ್ರಾಮದ ಸರ್ಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಸೇರಿ ಆರು ಶಿಕ್ಷಕರನ್ನು ಅಮಾನತು ಮಾಡಿ ಕೊಪ್ಪಳ ಡಿಡಿಪಿಐ ಶ್ರೀಶೈಲ ಬೀರದಾರ ಆದೇಶ ಹೊರಡಿಸಿದ್ದಾರೆ.

ಶಾಲಾ ಮಕ್ಕಳು ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬಾವಿಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದ. ಶಿಕ್ಷಕರ ನಿರ್ಲಕ್ಷ್ಯದಿಂದ ವಿದ್ಯಾರ್ಥಿಯ ಸಾವು ಸಂಭವಿಸಿದೆ ಎಂದು ಕರ್ತವ್ಯಲೋಪದ ಆರೋಪದಡಿ 6 ಶಿಕ್ಷಕರನ್ನು ಅಮಾನತುಗೊಳಿಸಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular