ಹೈದರಾಬಾದ್: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.
ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಾಲ್ತುಳಿತದಲ್ಲಿ ಮೃತಪಟ್ಟ ರೇವತಿ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗಲಾಟೆ ನಡೆಸಲಾಗಿದೆ.
ಅಲ್ಲು ಅರ್ಜುನ್ ಮನೆಯ ಮುಂದೆ ಪ್ರತಿಭಟನೆ ನಡೆಸಲಾಗಿದ್ದು, ಪ್ರತಿಭಟನಾಕಾರರನ್ನು ಅಲ್ಲು ಅರ್ಜುನ್ ಸಿಬ್ಬಂದಿ ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡು ಮನೆಯ ಮೇಲೆ ಕಲ್ಲುತೂರಾಟ ನಡೆಸಲಾಗಿದೆ.
ಪ್ರತಿಭಟನಾಕಾರರು ಮನೆ ಬಳಿ ಇದ್ದ ಅಲ್ಲು ಅರ್ಜುನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಹೂಕುಂಡಗಳನ್ನು ಒಡೆದು ಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.