ಪಂಜಾಬ್’ನ ಗುರುದಾಸ್ಪುರ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದಾರೆ.
ಆರೋಪಿಗಳನ್ನು ಗುರ್ವಿಂದರ್ ಸಿಂಗ್, ವೀರೇಂದ್ರ ಸಿಂಗ್ ಮತ್ತು ಜಸನ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಖಲಿಸ್ತಾನ್ ಕಮಾಂಡೋ ಫೋರ್ಸ್ ಎಂಬ ನಿಷೇಧಿತ ಸಂಘಟನೆಗೆ ಸೇರಿದವರಾಗಿದ್ದಾರೆ. ಪಂಜಾಬ್ ಪೊಲೀಸರು ಮತ್ತು ಉತ್ತರ ಪ್ರದೇಶ ಪೊಲೀಸರ ಜಂಟಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ಪೊಲೀಸರ ಪ್ರಕಾರ, ಪಂಜಾಬ್ ಪೊಲೀಸರ ತಂಡವು ಜಿಲ್ಲೆಯ ಪುರಾನ್ಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪ್ರದೇಶದಲ್ಲಿ ಮೂವರು ಆರೋಪಿಗಳು ಇರುವ ಬಗ್ಗೆ ಮಾಹಿತಿ ನೀಡಿತು, ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಪುರಾನ್ಪುರದಲ್ಲಿ ಅನುಮಾನಾಸ್ಪದ ವಸ್ತುಗಳೊಂದಿಗೆ ಮೂವರು ವ್ಯಕ್ತಿಗಳು ಇರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತು. ಸೋಮವಾರ ಮುಂಜಾನೆ ಎನ್ಕೌಂಟರ್ ಪ್ರಾರಂಭವಾಗಿದ್ದು, ಇದರಲ್ಲಿ ಮೂವರು ಆರೋಪಿಗಳು ಸಾವನ್ನಪ್ಪಿದ್ದಾರೆ.