ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಒಂಟಿ ಸಲಗವೊಂದು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಕಿಗೆ ಬಂದಿದೆ.
ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ 30 ವರ್ಷದ ಗಂಡಾನೆಯ ಶವ ಪತ್ತೆಯಾಗಿದೆ. ಮದಗಜಗಳ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಪಶುವೈದ್ಯರಿಂದ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆದಿದ್ದು, ಆನೆಯ ಬಲಗಾಲಿನಲ್ಲಿ ಗಾಯದ ಗುರುತು ಪತ್ತೆಯಾಗಿದೆ. ಮೃತ ಆನೆಯ ಎರಡೂ ದಂತಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.