ಬೆಳಗಾವಿ: ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ. ಬೆಳಗಾವಿ ಬಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಬಾಣಂತಿ ಸಾವಿಗೆ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೌಡವಾಡದ ವೈಶಾಲಿ ಕೊಟಬಾಗಿ ಮೃತ ಬಾಣಂತಿ. ನಾಲ್ಕು ದಿನಗಳ ಹಿಂದೆ ಹೆರಿಗೆ ನೋವಿನ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕು ಆಸ್ಪತ್ರೆಗೆ ಕೆರೆದೊಯ್ಯಲಾಗಿತ್ತು. ಆದರೆ ಅಲ್ಲಿ ವೈದ್ಯರಿಲ್ಲದ ಕಾರಣಕ್ಕೆ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ವೈಶಾಲಿಗೆ ಸಿಜೇರಿಯನ್ ಮೂಲಕ ಹೆರಿಗೆಯಾಗಿತ್ತು. ಆರೋಗ್ಯವಾಗಿಯೇ ಇದ್ದ ವೈಶಾಲಿಗೆ ಭಾನುವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿದೆ. ಐಸಿಯುಗೆ ಶಿಫ್ಟ್ ಆಗಿದ್ದ ವೈಶಾಲಿ ಕೊನೆಯುಸಿರೆಳೆದಿದ್ದಾರೆ.
ವೈದ್ಯರ ನಿರ್ಲಕ್ಷ್ಯವೇ ವೈಶಾಲಿ ಸಾವಿಗೆ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.