ಬೆಂಗಳೂರು : ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಡಿಸೆಂಬರ್ 31 ರ ಸಂಜೆ 6 ರಿಂದ ಜನವರಿ 1 ರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ನಿರ್ಬಂಧ ಹೇರಿದ್ದಾರೆ.ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ 2025 ಜನವರಿ 1 ರಂದು ಬೆಳಿಗ್ಗೆ 06 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅಥಿತಿ ಗೃಹಗಳಿಗೆ ಪ್ರವೇಶವನ್ನೂ ಬಂದ್ ಮಾಡಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವಿಂದ್ರ ಆದೇಶ ಹೊರಡಿಸಿದ್ದಾರೆ.