ಬೆಂಗಳೂರು: ಪತ್ನಿಗೆ ಅಕ್ರಮ ಸಂಬಂಧವಿರುವ ಆರೋಪ ಹಿನ್ನೆಲೆಯಲ್ಲಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ.
ಸ್ವಾಮಿ ಆತ್ಮಹತ್ಯೆಗೆ ಶರಣಾಗಿರುವ ಲಾರಿ ಮಾಲೀಕ. ಪತ್ನಿ ಅಕ್ರಮ ಸಂಬಂಧ ಹೊಂದಿದ್ದ ಬಗ್ಗೆ ಅನುಮಾನವಿತ್ತು. ಅಲ್ಲದೇ ಈ ಬಗ್ಗೆ ಆರೋಪ ಕೇಳಿಬಂದ ಕಾರಣಕ್ಕೆ ಆಕೆಗೆ ಬುದ್ಧಿವಾದ ಹೇಳಿದ್ದರೂ ಬಿಟ್ಟಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ಸ್ವಾಮಿ ತಡರಾತ್ರಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದರು. ಇದನ್ನು ಕಂಡು ಪತ್ನಿಯೇ ಸ್ವಾಮಿಯನ್ನು ರಕ್ಷಿಸಲು ಯತ್ನಿಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ನಿವೃತ್ತ ರಿಜಿಸ್ಟ್ರಾರ್ ಓರ್ವರ ಜೊತೆ ಸ್ವಾಮಿ ಪತ್ನಿಗೆ ಅಕ್ರಮ ಸಂಬಂಧವಿತ್ತು ಎಂದು ಮೃತ ಸ್ವಾಮಿ ಸಂಬಂಧಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.