ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಉದ್ಯಮಿ ವೆಂಕಟ ದತ್ತ ಸಾಯಿ ಜೊತೆ ಭಾನುವಾರ ಬೆಳಿಗ್ಗೆ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಆಪ್ತ ಕುಟುಂಬ ಮತ್ತು ಸ್ನೇಹಿತರು ಈ ಶುಭ ಸಮಾರಂಭಕ್ಕೆ ಸಾಕ್ಷಿಯಾದರು. ದಂಪತಿಗಳು ಇನ್ನೂ ಅಧಿಕೃತ ಫೋಟೋಗಳನ್ನು ಹಂಚಿಕೊಂಡಿಲ್ಲವಾದರೂ, ಈವೆಂಟ್ನ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಸಮಾರಂಭದ ಚಿತ್ರವನ್ನು ಆನ್ಲೈನ್ನಲ್ಲಿ ಹಂಚಿಕೊಳ್ಳುವ ಮೂಲಕ ನವವಿವಾಹಿತ ಜೋಡಿಯನ್ನು ಆಶೀರ್ವದಿಸಿದರು. ಡಿಸೆಂಬರ್ 24 ರಂದು ಸಿಂಧು ಅವರ ಹುಟ್ಟೂರಾದ ಹೈದರಾಬಾದ್ನಲ್ಲಿ ಆರತಕ್ಷತೆ ಹಮ್ಮಿಕೊಳ್ಳಲಾಗಿದೆ.