ಬೆಂಗಳೂರು: ಡಿಸೆಂಬರ್ 29 ರಂದು ನಿಗದಿಯಾದ ಕೆಎಎಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಮರು ಪರೀಕ್ಷೆಗೆ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪ ದೋಷಗಳಾಗದಂತೆ ಕರ್ನಾಟಕದ ಲೋಕಸೇವಾ ಆಯೋಗ ಎಚ್ಚರಿಕೆ ವಹಿಸಿದೆ.
ಕನ್ನಡದಲ್ಲಿನ ಪ್ರಶ್ನೆಗಳ ಭಾಷಾಂತರದಲ್ಲಿ ಗೊಂದಲವಾದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ನೋಡಿ ಅರ್ಥೈಸಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆ ಕೇಳಿ ಬಂದ ಕಾರಣ ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟಪಡಿಸಿದೆ.
ಶಿಸ್ತುಬದ್ಧವಾಗಿ ಪರೀಕ್ಷೆ ನಡೆಸಲು ಉನ್ನತ ಮಟ್ಟದಲ್ಲಿ ಹಲವು ಸಭೆ ನಡೆಸಿ ಚರ್ಚಿಸಲಾಗಿದ್ದು, ತಾಂತ್ರಿಕ ವಿಷಯಗಳನ್ನು ಪರಿಣಿತ ಭಾಷಾಂತಕಾರರಿಂದ ಭಾಷಾಂತರಿಸುವ ಜವಾಬ್ದಾರಿ ನೀಡಲಾಗಿದೆ. ಭಾಷಾಂತರ ಖಚಿತಪಡಿಸಲು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದವರಿಗೆ ಜವಾಬ್ದಾರಿ ವಹಿಸಲಾಗಿದ್ದು, ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಗೊಂದಲ, ಲೋಪ -ದೋಷ ಉಂಟಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಕಳೆದ ಬಾರಿಯ ತಪ್ಪು ಪುನಾರವರ್ತನೆ ಆಗದಂತೆ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲಾಗಿದ್ದು, ಡಿಸೆಂಬರ್ 29ರಂದು ನಡೆಯುವ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಯಾವುದೇ ಲೋಪ ದೋಷ ಉಂಟಾಗುವುದಿಲ್ಲ ಎಂದು ಹೇಳಲಾಗಿದೆ.