ಬೆಂಗಳೂರು: ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ಮತ್ತು ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸುವವರಿಗೆ ಡಿಸೆಂಬರ್ 31ರವರೆಗೆ ವಿಶೇಷ ದಂಡ ಶುಲ್ಕ ಪಾವತಿಸಿ ನೋಂದಣಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಲಾವಕಾಶ ಕಲ್ಪಿಸಿದೆ.
ಆಸಕ್ತರು ಈಗಾಗಲೇ ಜಾರಿಯಲ್ಲಿರುವ 1200 ರೂಪಾಯಿ ದಂಡ ಶುಲ್ಕದ ಜೊತೆಗೆ 1320 ರೂಪಾಯಿ ವಿಶೇಷ ದಂಡ ಶುಲ್ಕ ಪಾವತಿಸಿ ಆಯಾ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳಬಾರದು. ಯಾವುದೇ ಕಾರಣಕ್ಕೂ ಈ ಅವಕಾಶ ವಿಸ್ತರಿಸುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.