ಮಂಗಳೂರು: ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ. ಕಸ್ತೂರಿ ರಂಗನ್ ವರದಿ ಕುರಿತಾದ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಿಸಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಸ್ತೂರಿರಂಗನ್ ವರದಿಯನ್ನು ನಾವು ತಿರಸ್ಕರಿಸಿದ್ದೇವೆ ಎಂದು ಹೇಳಿದ್ದಾರೆ.
ಶತಮಾನಗಳಿಂದ ಜನ ಅರಣ್ಯದಂಚಿನಲ್ಲಿ ವಾಸಿಸುತ್ತಿದ್ದು, ಅರಣ್ಯವನ್ನು ರಕ್ಷಿಸುತ್ತಿದ್ದಾರೆ. ನಮ್ಮಲ್ಲಿ ಅರಣ್ಯ ರಕ್ಷಣೆಗಾಗಿ ಈಗಾಗಲೇ ಯೋಜನೆಗಳಿವೆ. ಜನರು, ಜನಪ್ರತಿನಿಧಿಗಳ ಬೇಡಿಕೆಯಂತೆ ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸಿದ್ದೇವೆ ಎಂದು ಕೇಂದ್ರ ಸರ್ಕಾರಕ್ಕೆ ಪುನರುಚ್ಚರಿಸಿರುವುದಾಗಿ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.
ರಾಜ್ಯದ 31 ಜಿಲ್ಲೆಗಳಲ್ಲಿ ಜಂಟಿ ಸರ್ವೆಗೆ ಸಮಿತಿ ರಚಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಜಂಟಿ ಸರ್ವೆ ಕಾರ್ಯ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.