ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತ ಪರ ಸಂಘಟನೆಗಳಿಂದ ಇಂದು ಗದಗ-ಬೆಟಗೇರಿ ಅವಳಿ ನಗರ ಬಂದ್ ಗೆ ಕರೆ ನೀಡಲಾಗಿದೆ.
ಸಂಸತ್ ನಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರೆದಿದೆ. ಅಮಿತ್ ಶಾ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು, ಇಂದು ಗದಗ –ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ
ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ. ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು ಕೂಡ ಗದಗ -ಬೆಟಗೇರಿ ಅವಳಿ ನಗರ ಬಂದ್ ಗೆ ಬೆಂಬಲ ನೀಡಿವೆ.
ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಹಕರಿಸುವಂತೆ ಕೋರಲಾಗಿದೆ. ಬಂದ್ ಹಿನ್ನಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.